ಕಂದಾಯ ನಿರೀಕ್ಷಕ ಅಮಾನತ್
ಕಂದಾಯ ನಿರೀಕ್ಷಕ ಅಮಾನತ್

ಬೋರ್ಡಿಂಗ್ ಪಾಸ್ ಪಡೆಯದ ಕಂದಾಯ ನಿರೀಕ್ಷಕ ಅಮಾನತು.
ಬೆಳಗಾವಿ:
ಮುಖ್ಯಮಂತ್ರಿ ಅವರೊಂದಿಗೆ ಆಗಮಿಸಿದ್ದ ಹಿರಿಯ ಅಧಿಕಾರಿಗಳ ಬೋರ್ಡಿಂಗ್ ಪಾಸ್‌ಗಳನ್ನು ಪಡೆಯದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬಾಗೇವಾಡಿ ಕಂದಾಯ ನಿರೀಕ್ಷಕರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಅವರ ಪ್ರವಾಸದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ವಿಮಾನ ಪ್ರಯಾಣಕ್ಕೆ ಅಗತ್ಯವಿದ್ದ ಬೋರ್ಡಿಂಗ್ ಪಾಸ್‌ಗಳನ್ನು ಮುಂಚಿತವಾಗಿ ಪಡೆದು, ಸುಗಮ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯನ್ನು ಸಂಬಂಧಪಟ್ಟ ಕಂದಾಯ ನಿರೀಕ್ಷಕರಿಗೆ ವಹಿಸಲಾಗಿತ್ತು. ಆದರೆ, ನಿಗದಿತ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಅಧಿಕಾರಿಗಳು ತೊಂದರೆ ಅನುಭವಿಸುವಂತಾಯಿತು ಎನ್ನಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಪ್ರಾಥಮಿಕ ವರದಿ ಆಧರಿಸಿ ಕಂದಾಯ ನಿರೀಕ್ಷಕರನ್ನು ತಕ್ಷಣದಿಂದಲೇ ಅಮಾನತುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಣೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಸಂಬಂಧಪಟ್ಟ ಶಿರಸ್ತೆದಾರರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
ನೋಟಿಸ್‌ಗೆ ಸಲ್ಲಿಸುವ ಉತ್ತರ ಪರಿಶೀಲಿಸಿದ ಬಳಿಕ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
