;
top of page
< Back

ಬೆಳಗಾವಿ ಕರ್ನಾಟಕದ ಅಂಗ’ ಠರಾವು: ಆದ್ಯತೆ ಮೇಲೆ ಕ್ರಮಕ್ಕೆ ಸೂಚನೆ
ನಾಗಮೋಹನ ದಾಸ್‌ ಮನವಿಗೆ ಮುಖ್ಯ ಕಾರ್ಯದರ್ಶಿ ಕಚೇರಿ ಸ್ಪಂದನೆ

ಬೆಳಗಾವಿ ಕರ್ನಾಟಕದ ಅಂಗ’ ಠರಾವು: ಆದ್ಯತೆ ಮೇಲೆ ಕ್ರಮಕ್ಕೆ ಸೂಚನೆ
ನಾಗಮೋಹನ ದಾಸ್‌ ಮನವಿಗೆ ಮುಖ್ಯ ಕಾರ್ಯದರ್ಶಿ ಕಚೇರಿ ಸ್ಪಂದನೆ

Kannada issue

ಬೆಳಗಾವಿ ಕರ್ನಾಟಕದ ಅಂಗ’ ಠರಾವು: ಆದ್ಯತೆ ಮೇಲೆ ಕ್ರಮಕ್ಕೆ ಸೂಚನೆ
ನಾಗಮೋಹನ ದಾಸ್‌ ಮನವಿಗೆ ಮುಖ್ಯ ಕಾರ್ಯದರ್ಶಿ ಕಚೇರಿ ಸ್ಪಂದನೆ

ಬೆಳಗಾವಿ: ‘
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹಾಗೂ ಗಡಿವಿವಾದ ಪರಿಹಾರಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ’ ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ಹೋರಾಟಕ್ಕೆ ಮಹತ್ವದ ತಿರುವು ದೊರೆತಿದೆ.
ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ್ ಅವರು ಆಯೋಗದ ಅಭಿಪ್ರಾಯದೊಂದಿಗೆ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿ ಸ್ಪಂದಿಸಿದ್ದು, ಆದ್ಯತೆ ಮೇಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದೆ.
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಮನವಿಯನ್ನು ನಾಗಮೋಹನ ದಾಸ್ ಅವರು ಜುಲೈ 18ರಂದು ಮುಖ್ಯ ಕಾರ್ಯದರ್ಶಿ ಕಚೇರಿಗೆ ಕಳುಹಿಸಿದ್ದರು. ಮನವಿಯನ್ನು CSO/004886/2026 ಸಂಖ್ಯೆಯಡಿ ದಾಖಲಿಸಿಕೊಂಡಿರುವ ಕಚೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿಗೆ ರವಾನಿಸಿದೆ.
ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಮನವಿಯನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡುವುದರ ಜೊತೆಗೆ, ವಿವರಗಳನ್ನು ಜನಸ್ಪಂದನ–ಐಪಿಜಿಆರ್‌ಎಸ್‌ ಪೋರ್ಟಲ್‌ನಲ್ಲಿ ದಾಖಲಿಸುವಂತೆಯೂ ನಿರ್ದೇಶಿಸಲಾಗಿದೆ.
ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಠರಾವು ಅಂಗೀಕರಿಸಲು ಯಾವುದೇ ಕಾನೂನಿನ ತೊಡಕಿಲ್ಲ ಎಂದು ನಾಗಮೋಹನ ದಾಸ್ ಅವರು ಈಗಾಗಲೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಕ್ರಮಕ್ಕೆ ಸೂಚನೆ ಬಂದಿರುವುದರಿಂದ, ಪಾಲಿಕೆ ಹಾಗೂ ನಗರಾಭಿವೃದ್ಧಿ ಇಲಾಖೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

bottom of page