;
top of page

ನೆಲ, ಜಲ, ಭಾಷೆ ಕುರಿತು 21ರಂದು ಬೆಳಗಾವಿಯಲ್ಲಿ ಸಂವಾದ

Writer: vilas joshi
vilas joshi
2 hours ago
1 min read

ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿಗಾಗಿ ಹೋರಾಡಿದ 22 ಕನ್ನಡ ಸಂಘಟನೆಗಳ ಪದಾಧಿಕಾರಿಗಳಿಗೆ ಸನ್ಮಾನ.


ಬೆಳಗಾವಿ:

ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ಕುರಿತ ಸಮಾಲೋಚನೆ, ಸಂವಾದ ಹಾಗೂ ಸನ್ಮಾನ ಕಾರ್ಯಕ್ರಮ ನವೆಂಬರ್ 21ರ ಶನಿವಾರ ಬೆಳಿಗ್ಗೆ 10ಕ್ಕೆ ಶಿವಬಸವನಗರದ ನಾಗನೂರು ಶ್ರೀ ರುದ್ರಾಕ್ಷಿಮಠದ ಆವರಣದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ಮಹಾವಿದ್ಯಾಲಯದ ಸಂಬರಗಿಮಠ ಸಭಾಂಗಣದಲ್ಲಿ ನಡೆಯಲಿದೆ.



ನಾಗನೂರು ಶ್ರೀ ರುದ್ರಾಕ್ಷಿಮಠದ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಸಮಾನ ಮನಸ್ಕ ಕನ್ನಡ ಸಂಘಟನೆಗಳ ವೇದಿಕೆ ಕಾರ್ಯಕ್ರಮ ಆಯೋಜಿಸಿವೆ. ಮಾಜಿ ಸಚಿವ, ಗದಗ ಶಾಸಕ ಎಚ್.ಕೆ. ಪಾಟೀಲ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಹಿರಿಯ ನ್ಯಾಯವಾದಿ ಎಸ್.ಎಂ. ಕುಲಕರ್ಣಿ ಅಧ್ಯಕ್ಷತೆ ವಹಿಸುವರು.



ಅಲ್ಲಮಪ್ರಭು ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಐತಿಹಾಸಿಕ ಗೊತ್ತುವಳಿ ಅಂಗೀಕಾರವಾಗುವಂತೆ ಆರು ತಿಂಗಳ ಕಾಲ ಹೋರಾಟ ನಡೆಸಿದ 22 ಕನ್ನಡ ಸಂಘಟನೆಗಳ ಪದಾಧಿಕಾರಿಗಳನ್ನು ಹಾಗೂ ಹೋರಾಟಕ್ಕೆ ಬೆಂಬಲ ನೀಡಿದ ಪ್ರಮುಖರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.



ಕನ್ನಡ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಕೋರಿದ್ದಾರೆ.



 
 
 

Comments


bottom of page