ಮೋದಿ ಜನ್ಮದಿನಕ್ಕೆ 53 ಸಾವಿರ ಮನೆಗಳಲ್ಲಿ ದೀಪೋತ್ಸವ.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ವಿನೂತನ ಕಾರ್ಯಕ್ರಮ;
ಮನೆ–ಮನೆಯಲ್ಲಿ ದೀಪ ಬೆಳಗಿಸಲು ಕರೆ.
ಬೆಳಗಾವಿ:
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಂದು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುಮಾರು 53 ಸಾವಿರ ಮನೆಗಳಲ್ಲಿ ಏಕಕಾಲಕ್ಕೆ ದೀಪ ಬೆಳಗಿಸುವ ‘ದೀಪೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಘಟಕದ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಮೂಲಕ ಮೋದಿ ಅವರ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಮತ್ತಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಗುವುದು.
‘ಸುಮಾರು 13 ವರ್ಷ ಮುಖ್ಯಮಂತ್ರಿಯಾಗಿ ಹಾಗೂ 12 ವರ್ಷಗಳಿಂದ ಪ್ರಧಾನಮಂತ್ರಿಯಾಗಿ ಮೋದಿ ಅವರು ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಕ್ಷೇತ್ರದ ಪ್ರತಿಯೊಂದು ಮನೆಗೂ ದೀಪೋತ್ಸವದ ಸಂದೇಶ ತಲುಪಿಸಲಾಗುತ್ತಿದೆ’ ಎಂದು ತಿಳಿಸಲಾಗಿದೆ.

ಸೆಪ್ಟೆಂಬರ್ 17ರ ಸಂಜೆ ಮನೆಗಳ ಮುಂದೆ ದೀಪ ಬೆಳಗಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರದ ನಾಗರಿಕರು ಮತ್ತು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಏಕಕಾಲಕ್ಕೆ 53 ಸಾವಿರ ಮನೆಗಳಲ್ಲಿ ಬೆಳಗಲಿರುವ ದೀಪಗಳು, ಪ್ರಧಾನಿ ಮೋದಿ ಅವರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಜನರು ಸಲ್ಲಿಸುವ ಶುಭಾಶಯದ ಸಂಕೇತವಾಗಲಿವೆ ಎಂದು ಅವರು ತಿಳಿಸಿದ್ದಾರೆ.




Comments