ವಿಶ್ರಾಂತಿ ಬಳಿಕ ಕೆಎಲ್‌ಇ ವೈದ್ಯಕೀಯ ಕಾಲೇಜಿಗೆ ಅಮಿತ್ ಶಾ ಭೇಟಿ.
Sep 19
1 min read
ಹುಬ್ಬಳ್ಳಿ:
ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲೇ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಂಜೆ ಆರೋಗ್ಯ ಸುಧಾರಿಸಿದ ಬಳಿಕ ಕೆಎಲ್‌ಇ ಸಂಸ್ಥೆಯ ನೂತನ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಮೂರುಸಾವಿರ ಮಠ ನೀಡಿದ 23 ಎಕರೆ ಜಾಗದಲ್ಲಿ ನಿರ್ಮಿಸಲಾಗಿರುವ ಕೆಎಲ್‌ಇ ವೈದ್ಯಕೀಯ ಮಹಾವಿದ್ಯಾಲಯ ಹಾಗೂ 1,200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆಯ ಉದ್ಘಾಟನಾ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾ, ವಿಶ್ರಾಂತಿ ಬಳಿಕ ಮತ್ತೊಮ್ಮೆ ಕಾಲೇಜಿಗೆ ಭೇಟಿ ನೀಡಿದರು.

ಈ ವೇಳೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವ್ಯವಸ್ಥೆಗಳನ್ನು ವೀಕ್ಷಿಸಿದ ಅವರು, ಕೆಎಲ್‌ಇ ಸಂಸ್ಥೆಯ ಶಿಕ್ಷಣ ಮತ್ತು ಆರೋಗ್ಯ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.




Comments